ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ

07han1
Published on

ಹನಗೋಡು: ಹನಗೋಡು ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಗ್ರಾಮಸ್ಥರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಯಿತು.

ಗ್ರಾಪಂ ಅಧ್ಯಕ್ಷ ಚನ್ನಯ್ಯ ಮಾತನಾಡಿ, ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನೆಯಲ್ಲಿ ಸಂಗ್ರಹವಾಗುವ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ ಹಸಿ-ಒಣಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ಮನೆ ಬಳಿಗೆ ಬರುವ ವಾಹನಗಳಿಗೆ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪಿಡಿಒ ಅನಿತಾ ಮಾತನಾಡಿ, ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ. ಸಂಗ್ರಹಗೊಳ್ಳುವ ಕಸವನ್ನು ಬೇರ್ಪಡಿಸಿ ಅಗತ್ಯವಾದುದ್ದನ್ನು ಮರುಬಳಕೆ ಮಾಡಲಾಗುವುದು. ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ನಿಷೇಧಿಸಲಾಗಿದ್ದು, ಪ್ರತಿಯೊಬ್ಬರೂ ಬಟ್ಟೆ ಬ್ಯಾಗ್‌ಗಳನ್ನು ಬಳಸುವಂತೆ ಕೋರಿದರು.

ಗ್ರಾಮದ ಬಿ.ಆರ್.ಕಾವಲ್ ರಸ್ತೆ ಬದಿಯ ಸಂತೆಯಾರ್ಡ್ ಹಾಗೂ ಆವರಣವನ್ನು ಗ್ರಾಪಂ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ವಚ್ಛಗೊಳಿಸಿದರು.ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ರತ್ನಾ, ಛಾಯಾ, ಸಂಗೀತಾ, ಸಂತೋಷ್, ಬೋರೇಗೌಡ, ಈಶ್ವರ್, ಮಹದೇವ್, ಸಿಬ್ಬಂದಿ ಚಂದ್ರಶೇಖರ್, ಆನಂದ್, ಶೀಲಾ, ಮುನಿಸ್ವಾಮಿ, ಪವನ್, ಹನುಮಂತ, ತೋಮಸ್, ಪೌರಕಾರ್ಮಿಕ ಆರ‌್ಮುಗಂ, ಅಂಗನವಾಡಿ ಕಾರ್ಯಕರ್ತೆಯರಾದ ವಿನೋದಾ, ಪೂರ್ಣಿಮಾ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net