ಉದ್ಯಮಿ ವಿರುದ್ಧವೇ ಸ್ವಾಮೀಜಿ ದೂರು:

crime
Published on

ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಸ್ವಾಮೀಜಿ ದೂರು ನೀಡಿದ್ದಾರೆ. ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್, ಉಡುಪಿ ಜಿಲ್ಲೆ ಬೈಂದೂರಿನ ದಿನೇಶ್ ನಾಯ್ಕಹೊಳೆ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ.೧೧ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದಾರೆ.
ಸ್ವಾಮೀಜಿ ಕಾರು ಚಾಲಕ ವಶ:
ಸ್ವಾಮೀಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net