ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆ!

Pub-crime-1
Published on

ಚಾಮರಾಜನಗರ: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಪ್ರಕರಣ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಇಂಥದ್ದೊಂದು ಘಟನೆ ನಡೆದಿದೆ.

ಹನೂರಿನ ಪಿಜಿ ಪಾಳ್ಯ ಹೊಸಮಠದ ರಾಜಶೇಖರಬುದ್ದಿ (70) ಶವವಾಗಿ ಪತ್ತೆಯಾಗಿರುವ ಸ್ವಾಮೀಜಿ. ಇವರು ಮೂರು ದಿನಗಳ ಹಿಂದೆ ಕಾಣೆಯಾಗಿದ್ದರು. ಸುತ್ತೂರು ಜಾತ್ರೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದವರು ಮರಳಿರಲಿಲ್ಲ.

ಆದರೆ ಇಂದು ಸ್ವಾಮೀಜಿಯ ಶವ ಸತ್ತೇಗಾಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು. ಈ ನಾಪತ್ತೆ ಮತ್ತು ಸಾವಿಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net