VIDEO | ಅಂಗಡಿ ಮುಂದೆ ಪಟಾಕಿ ಸಿಡಿಸಬೇಡ ಎಂದಿದ್ದಕ್ಕೆ ಬಿತ್ತು ಹಿಗ್ಗಾಮುಗ್ಗಾ ಹೊಡೆತ!

Untitled design (47)
Published on

ಗಾಜಿಯಾಬಾದ್, ಉತ್ತರಪ್ರದೇಶ: ದೇಶಾದ್ಯಂತ ದೀಪಾವಳಿ ಹಬ್ಬದ ಹಿನ್ನೆಲೆ ಬೀದಿ ಬೀದಿಗಳಲ್ಲಿ ಪಟಾಕಿ ಸಿಡಿಸಿ, ಹಬ್ಬವನ್ನು ಸಂಭ್ರಮಿಸಲಾಗುತ್ತಿದೆ. ಇದೇ ರೀತಿ ಸ್ವೀಟ್​ ಅಂಗಡಿಯೊಂದರ ಮುಂಭಾಗದಲ್ಲಿ ಕೆಲವರು ಪಟಾಕಿ ಹೊಡೆಯಲು ಮುಂದಾದ ವೇಳೆ ಅಂಗಡಿ ಮಾಲೀಕ ಇಲ್ಲಿ ಪಟಾಕಿ ಸಿಡಿಸಬೇಡಿ ಎಂದು ನಿರ್ಬಂಧ ಹೇರಿದ್ದಾರೆ. ಇದಕ್ಕೆ ಕುಪಿತಗೊಂಡ ಯುವಕರ ಗುಂಪೊಂದು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ನಲ್ಲಿ ವರದಿಯಾಗಿದೆ.

ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಉತ್ತರಪ್ರದೇಶದ ನಿವಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬುಪುರ್ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಅಂಗಡಿಯ ಮುಂದೆ ಪಟಾಕಿ ಸಿಡಿಸಬೇಡಿ ಎಂದು ಸ್ಥಳೀಯ ಸ್ವೀಟ್​ ಅಂಗಡಿ ಮಾಲೀಕ ಹೇಳಿದ್ದೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ.

ಅಂಗಡಿ ಮುಂದೆ ಪಟಾಕಿ ಸಿಡಿಸುವುದನ್ನು ತಡೆದಿದ್ದಕ್ಕೆ ಆಕ್ರೋಶಗೊಂಡ ಕೆಲವರು ಮಾಲೀಕನನ್ನು ಬೆನ್ನಟ್ಟಿ ಕೋಲು ಮತ್ತು ಇತರೆ ವಸ್ತುಗಳಿಂದ ದೈಹಿಕ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net