ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ

manavi
ಮಹಿಳಾ ಅಧಿಕಾರಿಗೆ ಬೆದರಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಪ್ರಮುಖರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಿ.ಎಸ್.ದಯಾನಂದ್, ಎಸ್.ಕೆ.ಪ್ರಭು, ಸಮೀರ್, ನಿರಂಜನ್ ಮುಂತಾದವರಿದ್ದರು.
Published on

ಶಿವಮೊಗ್ಗ: ಭದ್ರಾವತಿ ಸೀಗೆಬಾಗಿ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿ ಜ್ಯೋತಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕೆಆರ್‌ಎಸ್ ಪಕ್ಷದ ಪ್ರಮುಖರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

ಅಕ್ರಮ ಮರಳುಗಾರಿಕೆ ಮಾಡುತ್ತಿದ್ದವರನ್ನು ರಕ್ಷಣೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಂದು ಮಹಿಳಾ ಅಧಿಕಾರಿಯ ಸಹಾಯಕ್ಕೆ ತೆರಳದ, ಘಟನೆಗೆ ಕುಮ್ಮಕ್ಕು ನೀಡಿದ ಪೊಲೀಸರ ಮೇಲೂ ಶಿಸ್ತುಕ್ರಮ ಜರುಗಿಸಬೇಕು. ಇಡೀ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪ್ರಕರಣವನ್ನು ಭದ್ರಾವತಿ ತಾಲೂಕು ಬಿಟ್ಟು ಬೇರೆ ತಾಲೂಕಿನ ಠಾಣೆ ಮೂಲಕ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

ಕೆಆರ್‌ಎಸ್ ಪಕ್ಷದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಬಿ.ಎಸ್.ದಯಾನಂದ್, ಜಿಲ್ಲಾಧ್ಯಕ್ಷ ಎಸ್.ಕೆ.ಪ್ರಭು, ಕಾರ್ಯದರ್ಶಿ ಸಮೀರ್, ನಿರಂಜನ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net