ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಿ

vhp
ಬಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಎಚ್‌ಪಿ ಪದಾಧಿಕಾರಿಗಳು ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಟಿ.ರಂಗನಾಥ್, ಶಿವಕುಮಾರ್, ಸುನೀಲ್, ಅಮಿತ್ ಗೌಡ, ಕೃಷ್ಣ ಇತರರಿದ್ದರು.
Published on

ಚಿಕ್ಕಮಗಳೂರು: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿ, ಅವಹೇಳನಕಾರಿ ಹೇಳಿಕೆ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು.

ಭೀಮ್ ಆರ್ಮಿ ಸಂಘಟನೆ ಮುಖಂಡನೊಬ್ಬ ಬಜರಂಗದಳದವರು ಮುಸ್ಲಿಂ ಸಂಘಟನೆಗಳ ವಿರುದ್ಧ ಮುಗಿಬಿದ್ದರೆ ಭೀಮ್ ಆರ್ಮಿ ಸಂಘಟನೆಯವರು ಪ್ರತಿದಾಳಿ ನಡೆಸುವುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಹಿಂದುಪರ ಸಂಘಟನೆಯಾದ ಭಜರಂಗದಳವನ್ನು ಅವಹೇಳನ ಮಾಡಿ, ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.
ಸಾರ್ವಜನಿಕವಾಗಿ ಶಾಂತಿ, ಸುವ್ಯವಸ್ಥೆ ಕದಡುವ ಹಾಗೂ ಐಕ್ಯತೆ ಹಾಳುಮಾಡುವಂಥ ಹೇಳಿಕೆ ನೀಡುವ ಮೂಲಕ ಯುವಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಹೇಳಿಕೆಗಳ ಮೂಲಕ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕೋಮುವಾದಕ್ಕೆ ಪ್ರಚೋದನೆ ನೀಡುತ್ತಿರುವವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಟಿ.ರಂಗನಾಥ್, ಜಿಲ್ಲಾ ಸಂಯೋಜಕ ಶಿವಕುಮಾರ್, ಪ್ರಮುಖರಾದ ಸುನೀಲ್, ಅಮಿತ್ ಗೌಡ, ಕೃಷ್ಣ, ಯೋಗೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net