ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

30. ಪಿ ವೈ ಪಿ.01
Published on

ಮೈಸೂರು : ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಿರಿಯಾಪಟ್ಟಣ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಅಂಗವಿಕಲ ಫಲಾನುಭವಿಗಳಿಗೆ ನಾಲ್ಕು ಚಕ್ರದ ಸ್ಕೂಟರ್ ವಿತರಿಸಿ ಮಾತನಾಡಿ, ಸರ್ಕಾರದ ಯಾವುದೇ ಯೋಜನೆಗಳು ಪಾರದರ್ಶಕವಾಗಿ ಪ್ರಾಮಾಣಿಕ

ಫಲಾನುಭವಿಗಳಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.


ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಮಾತನಾಡಿ, 2022-23ನೇ ಸಾಲಿನ ತಾಲೂಕು ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ತಾಲೂಕಿನ ವಿಶೇಷ ಚೇತನ ಫಲಾನುಭವಿಗಳನ್ನು ಗುರುತಿಸಿ 10 ಜನರಿಗೆ ಸ್ಕೂಟರ್‌ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ತಹಸೀಲ್ದಾರ್ ಕುಂಇ ಅಹಮದ್, ಇನ್ಸ್‌ಪೆಕ್ಟರ್ ಕೆ.ವಿ.ಶ್ರೀಧರ್, ಪುರಸಭೆ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್, ಮುಖಂಡರಾದ ಡಿ.ಟಿ.ಸ್ವಾಮಿ, ಬಿ.ಜೆ.ಬಸವರಾಜು, ಅನಿಲ್‌ಕುಮಾರ್, ಸಣ್ಣಸ್ವಾಮಿ, ಪಾಪಣ್ಣನಾಯಕ, ಟಿ.ಈರಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net