

ಬೆಂಗಳೂರು: ಐಶ್ವರ್ಯಗೌಡ ಎಂಬುವರು ನನ್ನ ಹೆಸರು ದುರುಪಯೋಗಪಡಿಸಿಕೊಂಡು ವಂಚನೆ ನಡೆಸಿರುವುದಾಗಿ ಮಾಧ್ಯಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಐಶ್ವರ್ಯಗೌಡ ಅಲಿಯಾಸ್ ನವ್ಯಶ್ರೀ ಎಂಬುವರು ನನ್ನ ಹೆಸರು ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದ್ದು, ವಂಚನೆ ಮಾಡಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಿ ಹಾಗೂ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನ್ಯಾಯಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.