ಕಾಯಿಲೆ ಬರುವ ಮೊದಲು ಎಚ್ಚರ ವಹಿಸಿ

ಕಾಯಿಲೆ ಬರುವ ಮೊದಲು ಎಚ್ಚರ ವಹಿಸಿ
Published on

ಹನಗೋಡು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಲಾರ್ವ ಸಮೀಕ್ಷೆ ಹಾಗೂ ಡೆಂೆ, ಚಿಕೂನ್ ಗುನ್ಯಾ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.

ಹನಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಸುರಕ್ಷಣಾಧಿಕಾರಿ ನಿತ್ಯಾ ಮಾತನಾಡಿ, ಡೆಂೆ ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ ಹಾಗೂ ನಂತರದಲ್ಲಿ ಡೆಂೆ ಸೊಳ್ಳೆಗಳ ಸಂತತಿ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ಮನೆಯ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹಾಗೂ ಈ ಬಗ್ಗೆ ಪಾಲಕರಿಗೆ ತಿಳುವಳಿಕೆ ಹೇಳಬೇಕು ಎಂದರು.

ಕಾಯಿಲೆ ಬರುವ ಮುಂಚೆ ಮುಂಜಾಗ್ರತೆ ವಹಿಸುವುದು ಸೂಕ್ತ. ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ಕೊಳಚೆ ನೀರಿಲ್ಲದಂತೆ ಹಾಗೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮನೆ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕೆಂದು ಸಲಹೆ ನೀಡಿದರು.
ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net