ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸಲು ಕ್ರಮ ವಹಿಸಿ

30.Pyp. 01.
ಪಿರಿಯಾಪಟ್ಟಣ ತಾಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಿತಿನ್ ವೆಂಕಟೇಶ್ ಮಾತನಾಡಿದರು. ತಾಪಂ ಇಒ ಸುನೀಲ್‌ಕುಮಾರ್, ಧನರಾಜ್, ಕೆ.ಆರ್.ನಿರೂಪಾ, ಅಸ್ಲಾಂ ಪಾಷ, ಮಹದೇವ್ ಆಯಿತನಳ್ಳಿ, ವಿಂದ್ಯಾಶ್ರೀ, ರವಿ ಇತರರು ಇದ್ದರು.
Published on

ಪಿರಿಯಾಪಟ್ಟಣ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರ ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಸವಲತ್ತುಗಳನ್ನು ನೀಡುತ್ತಿದೆ. ಅಧಿಕಾರಿಗಳು ಕೇವಲ ಸಭೆಗಳಿಗೆ ಮಾತ್ರ ಸೀಮಿತವಾಗದೆ ಗ್ಯಾರಂಟಿ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿವೆಯೇ? ಎಂಬ ಬಗ್ಗೆ ನಿಗಾ ವಹಿಸಬೇಕು ಎಂದರು.

ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಿತಿ ಸದಸ್ಯರನ್ನು ಒಳಗೊಂಡಂತೆ ಸಭೆಗಳನ್ನು ಮಾಡಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಯಾರೊಬ್ಬರೂ ಅವಕಾಶಗಳಿಂದ ವಂಚಿತರಾಗಬಾರದು ಎಂದು ಸೂಚಿಸಿದರು.

ಸದಸ್ಯ ಕೃಷ್ಣೇಗೌಡ ಮಾತನಾಡಿ, ಪಡಿತರ ವಿತರಣೆ ಕೇಂದ್ರದಲ್ಲಿ ಪಡಿತರ ಪದಾರ್ಥಗಳನ್ನು ಕಾಲಿನಲ್ಲಿ ತುಳಿಯುತ್ತಾರೆ. ಇದಲ್ಲದೆ ಸಾಕಷ್ಟು ಕೂಲಿ ಕಾರ್ಮಿಕರಿಗೆ ಹೆಬ್ಬೆರಳು ಗುರುತು ಬಾರದೆ ಪಡಿತರ ಪದಾರ್ಥಗಳು ಸಿಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಅಧಿಕಾರಿಗಳು ಪರಿಹರಿಸುವಂತೆ ಒತ್ತಾಯಿಸಿದರು.

ಸಭೆಯಲ್ಲಿ ತಾಪಂ ಇಒ ಸುನೀಲ್‌ಕುಮಾರ್, ಸಮಿತಿ ಸದಸ್ಯರಾದ ಧನರಾಜ್, ಕೆ.ಆರ್.ನಿರೂಪಾ, ಅಸ್ಲಾಂ ಪಾಷಾ, ಮಹದೇವ್ ಆಯಿತನಳ್ಳಿ, ವಿಂದ್ಯಾಶ್ರೀ, ರವಿ, ರಘು, ವಿಜಯ್‌ಕುಮಾರ್, ಮಹದೇವ್ ನವಿಲೂರು , ಕುಮಾರ್, ರವೀಂದ್ರ, ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ್, ತಾಪಂ ಇಲಾಖೆ ವಿಶ್ವನಾಥ್, ವಸಂತಲಕ್ಷ್ಮೀ, ಸಿಡಿಪಿಒ ವೀಣಾ, ಉದ್ಯೋಗ ವಿನಿಮಯ ಕೇಂದ್ರದ ರಾಣಿ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ದರ್ಶನ್, ಸೆಸ್ಕ್ ಇಂಜಿನಿಯರ್ ಶಶಿಕುಮಾರ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net