ಸುಸ್ರೂತವಾಗಿ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಿ

ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ಸಭೆಯಲ್ಲಿ ಡಾ.ಔದ್ರಾಮ ಮಾತನಾಡಿದರು. ಹಣಮಂತಪ್ಪ ಕಾಲತಿಪ್ಪಿ, ಚಂದ್ರಶೇಖರ ಹೊಸಮನಿ ಮತ್ತಿತರರಿದ್ದಾರೆ.
ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ಸಭೆಯಲ್ಲಿ ಡಾ.ಔದ್ರಾಮ ಮಾತನಾಡಿದರು. ಹಣಮಂತಪ್ಪ ಕಾಲತಿಪ್ಪಿ, ಚಂದ್ರಶೇಖರ ಹೊಸಮನಿ ಮತ್ತಿತರರಿದ್ದಾರೆ.
Published on
ಜಿಲ್ಲೆಯ 16 ಪರೀಕ್ಷೆ ಕೇಂದ್ರಗಳಲ್ಲಿ ಜ.11 ರಂದು ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗಂದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಪ್ರಥಮಾವಧಿಯಲ್ಲಿ 6,608 ಅಭ್ಯರ್ಥಿಗಳು, ದ್ವಿತೀಯ ಅವಧಿಯಲ್ಲಿ 6,558 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಯಾವುದೇ ತೊಂದರೆಯಾಗದಂತೆ ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 16 ವೀಕಕ್ಷ, ಒಬ್ಬ ಉಪ ಮುಖ್ಯ ಅಧಿಕ್ಷಕ, ಪ್ರಶ್ನೆಪತ್ರಿಕೆ ಪಾಲಕರನ್ನು ಹಾಗೂ ಜಾಗ್ರತದಳ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷೆಗಳಲ್ಲಿ ಯಾವುದೇ ಗೊಂದಲ ಮಾಡಿಕೊಳ್ಳದೆ ಪರೀಕ್ಷೆ ನಿಯಮಗಳನ್ವಯ ಕಾರ್ಯ ನಿರ್ವಹಿಸಲು ಅವರು ಸೂಚಿಸಿದರು.
ಜಿಲ್ಲಾ ಖನೆಯ ಉಪ ನಿರ್ದೇಶಕ ಹಣಮಂತಪ್ಪ ಕಾಲತಿಪ್ಪಿ, ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net