ತಳವಾರ, ಪರಿವಾರ, ಸಿದ್ಧಿ ಜನಾಂಗ ಎಸ್​ಟಿಗೆ: ಅಧಿಸೂಚನೆ ಪ್ರಕಟ

talawara1web
Published on

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ (ಎಸ್​ಟಿ) ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಸೇರಿಸಿ ಹೊಸ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.

ಈ ಪಂಗಡಗಳನ್ನು ಎಸ್​ಟಿಗೆ ಸೇರಿಸಬೇಕೆನ್ನುವ ಬಹು ವರ್ಷಗಳ ಆಸೆ ಈಗ ಇಡೇರಿದೆ.

ಈ ಕುರಿತು ಕರ್ನಾಟಕ ಸರ್ಕಾರದ ಗೆಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ ಎಂದು ನಮೂದಿಸಲಾಗಿದೆ.

ನಾಯ್ಕಡ, ನಾಯಕ (ಪರಿವಾರ ಮತ್ತು ತಳವಾರ ಸೇರಿ) ಹಾಗೂ ಸಿದ್ದಿ (ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆ) ಎಸ್​ಟಿಗೆ ಸೇರಿಸಲಾಗಿದೆ ಅದರಲ್ಲಿ ಉಲ್ಲೇಖಿಸಲಾಗಿದೆ. ಸ್ಥಳೀಯ ಪ್ರಾಧಿಕಾರಿಗಳ ನಿಯಮಕ್ಕೆ ಒಳಪಟ್ಟು ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಸರ್ಕಾರದ ಅಧಿಸೂಚನೆ ಹೇಳಿದೆ.

ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಹಿಂದುಳಿದ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ಧನ್ಯವಾದ ಸಲ್ಲಿಸಿದ್ದಾರೆ. "ಈ ಹಿಂದೆ ನಮ್ಮ ಸರ್ಕಾರ ಈ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಿ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಟ್ಟಿತ್ತು. ಸಹಕರಿಸಿದ ಎಲ್ಲರಿಗೂ ಧನ್ಯವಾದ' ಎಂದು ಸಿದ್ದರಾಮಯ್ಯ ಟ್ವೀಟ್​ನಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net