

ರಾಣೆಬೆನ್ನೂರ: ಜಿಲ್ಲೆಯ ನೇಕಾರ ಪದ್ಮಶಾಲಿ ಸಮಾಜ ಸೇವಾ ಸಂಘದ ವತಿಯಿಂದ ಪದ್ಮಶಾಲಿ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಆದ್ದರಿಂದ ಅರ್ಹ ವಿದ್ಯಾರ್ಥಿಗಳು ದೃಢಿಕೃತ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, 3 ಪಾಸ್‌ಪೋರ್ಟ್ ಅಳತೆಯ ಫೋಟೊ ತರಬೇಕು. ಜೂ. 10ರೊಳಗೆ ಹನುಮಂತಪ್ಪ ಮುಕ್ತೇನಹಳ್ಳಿ, ಗುರು ಮಾರ್ಕಂಡೇಶ್ವರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ, ಕೆ.ಬಿ. ರೋಡ್ ರಾಣೆಬೆನ್ನೂರ ಇಲ್ಲಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.