ಉಪಜಾತಿಗಳಿಗೆ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ತಮಟೆ ಚಳವಳಿ

Dalit Sangharsh Committee protest
ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಕಲ್ಪಿಸಲು ಆಗ್ರಹಿಸಿ ಡಿಎಸ್‌ಎಸ್ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ತಮಟೆ ಚಳವಳಿ ನಡೆಸಿದರು. ಎಂ.ಗುರುಮೂರ್ತಿ, ಬಿ.ಎ.ಕಾಟ್ಕೆ, ಎಂ.ಏಳುಕೋಟಿ, ಶಿವಬಸಪ್ಪ, ಚಂದ್ರಪ್ಪ ಜೋಗಿ, ತಮ್ಮಯ್ಯ, ಕೃಷ್ಣ ಬೊಮ್ಮನಕಟ್ಟೆ ಇದ್ದರು.
Published on

ಶಿವಮೊಗ್ಗ: ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನಬದ್ಧ ಅಧಿಕಾರ ಇದೆ ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ತಮಟೆ ಚಳವಳಿ ನಡೆಸಿದರು.

ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಕಳೆದ ಆ.1ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕ. ಎಲ್ಲ ರಾಜ್ಯ ಸರ್ಕಾರಗಳಿಗೆ ಆದೇಶ ಅನುಷ್ಠಾನಗೊಳಿಸುವ ಅಧಿಕಾರ ಇದೆ. ಈ ದಿಸೆಯಲ್ಲಿ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಆಗ್ರಹಿಸಿದರು.
ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಡಿಸಿ ಗುರುದತ್ತ ಹೆಗಡೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಮಾತನಾಡಿ, ಒಳಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ನ್ಯಾಯಾಲಯ ಈಗಾಗಲೇ ತೆರೆ ಎಳೆದಿದೆ. ಆದೇಶ ಹೊರಬಿದ್ದು ಒಂದು ತಿಂಗಳಾದರೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸದೇ ನಿರ್ಲಕ್ಷೃ ಮಾಡುತ್ತಿದೆ. ರಾಜ್ಯದ ಎಲ್ಲ ಡಿಸಿ ಕಚೇರಿಗಳ ಎದುರು ಚಳವಳಿ ಮೂಲಕ ಸರ್ಕಾರವನ್ನು ಬಡಿದೆಬ್ಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಖಜಾಂಚಿ ಬಿ.ಎ.ಕಾಟ್ಕೆ, ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ಪ್ರಮುಖರಾದ ಶಿವಬಸಪ್ಪ, ಚಂದ್ರಪ್ಪ ಜೋಗಿ, ತಮ್ಮಯ್ಯ, ಕೃಷ್ಣ ಬೊಮ್ಮನಕಟ್ಟೆ, ಶಿವಪ್ಪ ಕೌತಿ, ಗಂಗಮಾಳಮ್ಮ ಮೂಗೂರು, ಎಂ.ರಮೇಶ್ ಚಿಕ್ಕಮರಡಿ, ನಾಗರಾಜ್, ನಾಗರಾಜ್ ಕಾಚಗೊಂಡನಹಳ್ಳಿ, ಬಸವರಾಜ ಹಸ್ಕಿ, ಹರಿಗೆ ರವಿ, ಮಾರವಳ್ಳಿ ಬಸವರಾಜ್, ದೇವೇಂದ್ರಪ್ಪ ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net