ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ನಮ್ಮ ಶಕ್ತಿ ಗೊತ್ತಿದೆ : DK ಶಿವಕುಮಾರ್​

dk - 2025-03-22T212741.677
Published on

ಬಿಜೆಪಿಯ ಕಪ್ಪು ಬಾವುಟ ಪ್ರದರ್ಶನಕ್ಕೆ ನಾವು ಹೆದರುವುದಿಲ್ಲ. ಅವರ ನಡೆಯನ್ನು ನಾವು ಸ್ವಾಗತಿಸುತ್ತೇವೆ. ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದಾಗಲೇ ಹೆದರಲಿಲ್ಲ. ಇಲ್ಲಿನ ಬಿಜೆಪಿ ಅಧ್ಯಕ್ಷ (ಅಣ್ಣಾಮಲೈ) ನಮ್ಮ ರಾಜ್ಯದಲ್ಲಿ ಕೆಲಸ ಮಾಡಿದ್ದಾರೆ. ನಮ್ಮ ಶಕ್ತಿ ಅವರಿಗೆ ಗೊತ್ತಿದೆ ಎಂದು ಡಿಸಿಎಂ DK ಶಿವಕುಮಾರ್​ ಕಾಲೆಳೆದರು.

ಸಂಸತ್ ಕ್ಷೇತ್ರಗಳು ಕಡಿಮೆಯಾಗಲು ಬಿಡಲ್ಲ

"ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ. ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ" ಎಂದು ಚೆನ್ನೈ ಪ್ರವಾಸದ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಶನಿವಾರ ಮಾತನಾಡಿದರು.

"ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಪ್ರಗತಿ ಎನ್ನುವ ಮಾತಿನ ಮೇಲೆ ನಂಬಿಕೆಯನ್ನು ಇಟ್ಟಿರುವವರು ನಾವು. ಸ್ಟಾಲಿನ್ ಅವರ ನಾಯಕತ್ವದಲ್ಲಿ ದಕ್ಷಿಣ ಭಾರತ ರಾಜ್ಯಗಳು ಹಾಗೂ ಪಂಜಾಬ್ ರಾಜ್ಯ ಭಾಗವಹಿಸುತ್ತಿದ್ದು ಯಾವುದೇ ಕಾರಣಕ್ಕೂ ನಮ್ಮ ಹಕ್ಕುಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮಾಜಿ ಪ್ರಧಾನಿ ವಾಜಪೇಯ ಅವರು ಇದೇ ರೀತಿ 2002 ರಲ್ಲಿ 84 ನೇ ತಿದ್ದುಪಡಿ ಮೂಲಕ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು" ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net