ತಮಿಳುನಾಡಿನ ಸರ್ಕಾರಿ ಸಿಬ್ಬಂದಿ, ಶಿಕ್ಷಕರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿದ ಸಿಎಂ ಎಂ.ಕೆ.ಸ್ಟಾಲಿನ್| M K Stalin

ವಿಜಯವಾಣಿ - 2025-11-13T174952.655
Published on

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮಿಳುನಾಡಿನ ಸರ್ಕಾರಿ ಸಿಬ್ಬಂದಿ, ಶಿಕ್ಷಕರು ಹಾಗೂ ಪಿಂಚಣಿದಾರರಿಗೆ ಇಂದು(ನ. 13) ಸಿಎಂ ಎಂ.ಕೆ.ಸ್ಟಾಲಿನ್(M K Stalin) ಶೇ. 3ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಳವನ್ನು ಘೋಷಣೆ ಮಾಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸ್ಟಾಲಿನ್, ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕರು ತಳಮಟ್ಟದಲ್ಲಿ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಮತ್ತು ಹಣಕಾಸಿನ ಒತ್ತಡಗಳ ಹೊರತಾಗಿಯೂ ರಾಜ್ಯವು ಅವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

2025  ಜುಲೈ 1ರಿಂದ ಜಾರಿಗೆ ಬರುವಂತೆ ಶೇ.55 ರಿಂದ ಶೇ.58 ಕ್ಕೆ ರಾಜ್ಯದ ಡಿಎ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹೆಚ್ಚಳವು ಸುಮಾರು 16 ಲಕ್ಷ ಸರ್ಕಾರಿ ನೌಕರರು, ಶಿಕ್ಷಕರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ರಾಜ್ಯಕ್ಕೆ ವಾರ್ಷಿಕವಾಗಿ 1,829 ಕೋಟಿ ರೂ.ಗಳ ಹೊರೆ ಬೀಳಲಿದೆ.

2026ರ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರಿವ ಹಿನ್ನೆಲೆ ಡಿಎಂಕೆ ಸರ್ಕಾರವು ಕಳೆದ ಚುನಾವಣೆಯಲ್ಲಿ ನೀಡಿದ್ದ ಹಳೆಯ ಪಿಂಚಣಿ ಯೋಜನೆ (OPS) ಅನ್ನು ಪುನಃಸ್ಥಾಪಿಸುವ ಚುನಾವಣಾ ಭರವಸೆಯನ್ನು ಈಡೇರಿಸದ ಕಾರಣ. ಸರ್ಕಾರಿ ಸಿಬ್ಬಂದಿಯಲ್ಲಿನ ಅಸಮಾಧಾನವನ್ನು ಕಡಿಮೆ ಮಾಡಲು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ ಎನ್ನಲಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net