ತಮಿಳುನಾಡು ಕಾಲ್ತುಳಿತ ದುರಂತ; ಮೃತರ ಸಂಖ್ಯೆ 33ಕ್ಕೆ ಏರಿಕೆ: ಪ್ರಧಾನಿ ಮೋದಿ ಸಂತಾಪ

Untitled design - 2025-09-27T214957.198
Published on

TVK Vijay Rally: ತಮಿಳುನಾಡಿನ ಕರೂರಿನಲ್ಲಿ ಶನಿವಾರ (ಸೆ.27) ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 33ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿಯವರೆಗೂ ಘಟನೆಯಲ್ಲಿ ಗಾಯಗೊಂಡಿರುವವರ ಸಂಖ್ಯೆ 40ಕ್ಕೂ ಅಧಿಕ ಏರಿಕೆಯಾಗಿದೆ. 6 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 40 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವರು ತಿಳಿಸಿದ್ದಾರೆ.

ವಿಜಯ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಜನಸಂದಣಿ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ನರೇಂದ್ರ ಮೋದಿ ಸಂತಾಪ

ಸಂಭವಿಸಿದ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಬಲಿಯಾದವರ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net