ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮತ್ತೆ ನಾಲ್ಕುದಿನ ಮಳೆ

rain
Published on

ಚೆನ್ನೈ: ತಮಿಳುನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಗಲಿದೆ. ಮುಂದಿನ ನಾಲ್ಕು ದಿನಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ವಾರ, ಮೈಚಾಂಗ್ ಚಂಡಮಾರುತವು ಚೆನ್ನೈ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಚೆನ್ನೈ ಪ್ರವಾಹಕ್ಕೆ ಸಹ ತುತ್ತಾಗಿತ್ತು. ಆಂಧ್ರಪ್ರದೇಶದತ್ತ ಮೈಚಾಂಗ್ ಚಂಡಮಾರುತದ ಮುಖಮಾಡಿದ ನಂತರ ತಮಿಳುನಾಡಿನಲ್ಲಿ ಮಳೆ ಕಡಿಮೆಯಾಗಿತ್ತು.

ಆದರೆ ಈಗ ಮತ್ತೆ ಮಳೆಯಾಗುತ್ತಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಮಂಡಲದ ಕೆಳಮುಖ ಪರಿಚಲನೆ ಉಂಟಾಗಿರುವುದರಿಂದ ಡಿ.16ರಿಂದ 19ರವರೆಗೆ ತಮಿಳುನಾಡಿನಲ್ಲಿ 4 ದಿನಗಳ ಕಾಲ ಭಾಎಇ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಡಿ.16 ಮತ್ತು ಡಿ.17 ಭಾರೀ ಮಳೆಯಾಗಲಿದೆ.

ಕನಿಷ್ಠ 11 ಸೆಂಮೀ ನಿಂದ 20 ಸೆಂಮೀ ಮಳೆಯಾಗಲಿದೆ ಎಂದು ವರದಿಯಾಗಿದೆ. ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ, ತಂಜಾವೂರು, ನಾಗಪಟ್ಟಣಂ ಮತ್ತು ಮೈಲಾಡುತುರೈ ಜಿಲ್ಲೆಗಳಲ್ಲಿ ಭಾರ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮಳೆಯಿಲ್ಲ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್​ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದ ಮೇಲಾಗಿದೆಯಾದರೂ, ಮಳೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಶುಕ್ರವಾರದಿಂದಲೇ ಮೋಡ ಮುಸುಕಿದ ವಾತಾವರಣವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net