ತಾರಕ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

kaveri river
Published on

ಮೈಸೂರು: ತಾರಕ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಗರಿಷ್ಠ ಮಟ್ಟ ತಲುಪುವ ಹಂತದಲ್ಲಿ ಇರುವುದರಿಂದ, ಜಲಾಶಯದಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ನೀರನ್ನು ಹೊರ ಬಿಡಲಾಗುವುದು.

ಆದ್ದರಿಂದ ತಾರಕ ನದಿಯ ದಂಡೆಯಲ್ಲಿ ವಾಸಿಸುವವರು ಹಾಗೂ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ, ಜನ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಿದೆ ಎಂದು ಹೆಚ್.ಡಿ.ಕೋಟೆಯ ಕಾ.ನೀ.ನಿ.ನಿ.ಯ ತಾರಕ ನಾಲಾ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net