

ರಾಣೆಬೆನ್ನೂರ: ವಿದ್ಯಾಥಿರ್ಗಳು ಓದುವ ಸಮಯದಲ್ಲಿ ಸರಿಯಾದ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಬೇಕು. ಪ್ರಾಮಾಣಿಕವಾಗಿ ಪುಸ್ತಕಗಳ ಕೈ ಹಿಡಿದರೆ ಮುಂದಿನ ಭವಿಷ್ಯದಲ್ಲಿ ಯಾರ ಕೈ&ಕಾಲು ಹಿಡಿಯುವ ಪರಿಸ್ಥಿತಿ ಬರುವುದಿಲ್ಲ ಎಂದು ಸಂಜೀವಿನಿ ಕಾಲೇಜ್ ಪ್ರಾಚಾರ್ಯ ಪ್ರಭುಲಿಂಗ ಕೋಡದ ಹೇಳಿದರು.
ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ 2025&26ನೇ ಸಾಲಿನ ಪ್ರಥಮ ವರ್ಷದ ವಿದ್ಯಾಥಿರ್ಗಳ ಓರಿಯೆಂಟೇಷನ್( ಸ್ವಾಗತ ) ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು.
ಒಮ್ಮೆ ನೀವು ಯಶಸ್ಸು ಗಳಿಸಿದರೆ ಜೀವನದಲ್ಲಿ ಎಲ್ಲವೂ ನಿಮ್ಮನ್ನು ಹಿಂಬಾಲಿಸಿ ಬರುತ್ತದೆ. ಆದರೆ ಸಂತೋಷ, ವೈಭೋಗದ ಹಿಂದೆ ಓಡಿದರೆ ಯಶಸ್ಸು ಖಂಡಿತ ನಿಮ್ಮದಾಗುವುದು ಅಸಾಧ್ಯ. ಶಿಸ್ತು, ಕಠಿಣ ಪರಿಶ್ರಮ, ದೃಢಸಂಕಲ್ಪ, ಸಾಧಿಸುವ ಛಲ, ಏಕಾಗ್ರತೆ ಈ ಎಲ್ಲವನ್ನು ನಿಮ್ಮಲ್ಲಿ ಬೆಳಸಿಕೊಂಡಾಗ ಯಶಸ್ಸು ತಾನಾಗಿಯೇ ಒಲಿದು ಬರುತ್ತದೆ ಎಂದರು.
ಪ್ರಾಚಾರ್ಯ ಡಾ. ಎಸ್.ಜಿ. ಮಾಕನೂರು ಅಧ್ಯಕ್ಷತೆ ವಹಿಸಿದ್ದರು.
ಡೀನ್ ಅಕಾಡೆಮಿ ಡಾ. ಎಸ್.ಎಫ್. ಕೋಡದ, ಉಪನ್ಯಾಸಕರಾದ ಡಾ. ಎಂ.ಈ. ಶಿವಕುಮಾರ ಹೊನ್ನಾಳಿ, ಸಿ.ಎಂ. ಪರಮೇಶ್ವರಪ್ಪ, ಡಾ. ಬಿ. ಮಹೇಶ್ವರಪ್ಪ, ಡಾ. ಮುಜಿಬುಲ್ಲಾ ಖಾನ್ ಗುತ್ತಲ, ದಿನೇಶ ಮಾಗನೂರ, ಡಾ. ಡಿ.ಎಸ್. ವಿಶ್ವನಾಥ, ಪುಷ್ಪ ತೆಂಬದ, ಸಿ.ಎಂ. ಶ್ವೇತಾ, ಭಾವನಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.