ಕೆಲಸ ಪ್ರೀತಿಸಿ ಪ್ರಾಮಾಣಿಕವಾಗಿ ಮಾಡಿದರೆ ಯಶಸ್ಸು ಸಾಧ್ಯ

19-RNR-04
Published on

ರಾಣೆಬೆನ್ನೂರ: ಪ್ರತಿಯೊಬ್ಬ ಪದವೀಧರರು ಕೂಡ ಸಮಸ್ಯೆಗಳನ್ನು ಸರಿಯಾಗಿ ಗುರುತಿಸಿ ಅದಕ್ಕೆ ವಿಮರ್ಶಾತ್ಮಕ ಪರಿಹಾರ ಕಂಡುಕೊಳ್ಳುವ ಬಗ್ಗೆ ಚಿಂತನೆ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ನೀವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಬಿ.ಇ. ಪದವೀಧರರಿಗೆ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಜೀವನವನ್ನು ರೂಪಿಸುವಲ್ಲಿ ಅಪಾರ ತ್ಯಾಗವನ್ನು ಮಾಡಿದ ಮಾತಾ ಪಿತರನ್ನು ಮತ್ತು ಕಲಿತ ವಿದ್ಯಾಸಂಸ್ಥೆಯನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಿ. ಈ ಮಣ್ಣಿನ, ನೆಲ, ಜಲದ ಬಗ್ಗೆ ಪ್ರೀತಿ ಗೌರವವಿರುವ ಪ್ರಜ್ಞಾವಂತ ಪ್ರಜೆಗಳಾಗಿ ಎಂದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್​.ಜಿ. ಮಾಕನೂರ ಅಧ್ಯಕ್ಷತೆ ವಹಿಸಿದ್ದರು. 180ಕ್ಕೂ ಹೆಚ್ಚು ವಿದ್ಯಾಥಿರ್ಗಳಿಗೆ ಪದವಿ ಪ್ರದಾನ ಮಾಡಲಾಯಿತು.

ವಿವಿಧ ವಿಭಾಗದ ಮುಖ್ಯಸ್ಥರಾದ ಡಾ. ಎಸ್​.ಎಫ್​. ಕೋಡದ, ಸಿ.ಎಂ. ಪರಮೇಶ್ವರಪ್ಪ, ಡಾ. ಬಿ. ಮಹೇಶ್ವರಪ್ಪ, ಡಾ. ಸವಿತಾ ಚನ್ನಗೌಡ್ರು, ಡಾ. ಮುಜಿಬುಲ್ಲಾ ಖಾನಗುತ್ತಲ, ದಿನೇಶ ಮಾಗನೂರ, ಬಿ.ಎಸ್​. ಸಣ್ಣಗೌಡ್ರು, ಶಿವಪ್ಪ ನಂದಿಹಳ್ಳಿ, ಗಂಗಾಧರ ಬಣಕಾರ, ಕರೀಗೌಡ್ರು ಬಾಗೂರು, ಸಿ.ಎಂ. ಶ್ವೇತಾ, ಎಸ್​. ವಿಶ್ವನಾಥ, ಭಾವನಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net