

ರಾಣೆಬೆನ್ನೂರ: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಭಾರ ಪ್ರಾಚಾರ್ಯ ಡಾ. ಎಸ್.ಜಿ. ಮಾಕನೂರ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಪ್ರತಿಯೊಬ್ಬರೂ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಅದನ್ನು ತಲುಪುವವರೆಗೂ ಹೋರಾಟ ಮಾಡಬೇಕು ಎಂದರು.
ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಸಿ.ಎಂ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕಿ ಭಾವನಾ ಪಾಟೀಲ, ವಿದ್ಯಾರ್ಥಿ ಸಂಯೋಜಕ ಎ. ದರ್ಶನ ಮತ್ತಿತರರು ಉಪಸ್ಥಿತರಿದ್ದರು.
ದೀಕ್ಷಾ ಪಾಟೀಲ ಸ್ವಾಗತಿಸಿದರು. ಎಸ್.ಎಚ್. ಪುನೀತ ಹಾಗೂ ಅನುಷಾ ನಾಡಿಗೇರ ನಿರೂಪಿಸಿದರು. ರಕ್ಷಿತಾ ಬಾಳಿಕಾಯಿ ವಂದಿಸಿದರು.