ರಾಜಸ್ಥಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಯ್ತು ಕನ್ನಡ ಸಿನಿಮಾ!

Untitled design (65)
Published on

ಬೆಂಗಳೂರು: ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ 'ಸಿದ್ದು ಪೂರ್ಣಚಂದ್ರ' ಮತ್ತೊಂದು ಅಂತಹದೇ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ 'ತಾರಿಣಿ'.

ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ "ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್"ಗೆ ಇದೀಗ 'ತಾರಿಣಿ' ಆಯ್ಕೆಯಾಗಿದೆ ಎಂದು ಚಿತ್ರತಂಡ ಸಂತಸದಿಂದ ಹೇಳಿಕೊಂಡಿದೆ. ಜನವರಿ ತಿಂಗಳಲ್ಲಿ ರಾಜಸ್ಥಾನದ ಜೈಪುರ್​ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಾಗಲಿದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ.

ಶ್ರೀ ಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ಬಂಡವಾಳ ಹೂಡಿದ್ದಾರೆ. ಜತೆಗೆ ಒಂದು ಮುಖ್ಯಪಾತ್ರದಲ್ಲೂ ಕೂಡ ಅಭಿನಯಿಸಿದ್ದಾರೆ. ಗರ್ಭಿಣಿ ಮಹಿಳೆ ಕುರಿತಾದ ಕಥಾ ಸಾರಾಂಶ ಹೊಂದಿರುವ "ತಾರಿಣಿ" ಚಿತ್ರದಲ್ಲಿ ನಿಜವಾಗಿಯೂ ಪ್ರಗ್ನೆಂಟ್ ಆಗಿಯೇ ನಟಿ ಮಮತಾ ರಾಹುತ್ ಅಭಿನಯಿಸಿದ್ದಾರೆ.

ಆಗಷ್ಟೇ ಹುಟ್ಟಿದ ಮಮತಾ ರಾಹುತ್ ಅವರ ಮಗುವಿನ ದೃಶ್ಯಗಳೂ 'ತಾರಿಣಿ' ಚಿತ್ರದಲ್ಲಿರುವುದು ಮತ್ತಷ್ಟು ವಿಶೇಷ. ಈಗಾಗಲೇ ಅನೇಕ ಚಿತ್ರೋತ್ಸವಗಳಿಗೂ ಈ ಚಿತ್ರವನ್ನು ಕಳುಹಿಸಲಾಗಿದೆ. ಎಲ್ಲಾ ಕಡೆಯೂ ಪ್ರದರ್ಶನಗೊಂಡು ಅವಾರ್ಡ್ ಗೆಲ್ಲುವ ನಿರೀಕ್ಷೆಯಿದೆ ಎಂದು ನಿರ್ದೇಶಕರು ಆತ್ಮವಿಶ್ವಾಸ ತೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net