ಕೇಂದ್ರದಿಂದ ತೆರಿಗೆ ವಂಚನೆ; ದಕ್ಷಿಣ ರಾಜ್ಯಗಳು ಒಟ್ಟಿಗೆ ಸೇರಿ ಹೋರಾಟ ಮಾಡುವ ಅಗತ್ಯವಿದೆ: ಸಿಎಂ|fight

vilas
Published on

ಬೆಂಗಳೂರು: ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ವಂಚನೆಗೆ ಒಳಗಾಗಿರುವ ದಕ್ಷಿಣ ರಾಜ್ಯಗಳು ಒಟ್ಟಿಗೆ ಸೇರಿ ಹೋರಾಟ ಮಾಡುವ ಅಗತ್ಯವಿದೆ(Tax evasion by the Centre; Southern states need to come together and fight it)ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದರು.

ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆಯಿಂದ 300ಕ್ಕೂ ಹೆಚ್ಚು ಹೊಸ ವಾಹನಗಳಿಗೆ ಚಾಲನೆ ನೀಡಿ, 95 ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು.

ಜಿಎಸ್‌ಟಿ ಪಾವತಿಯಲ್ಲಿ ದೇಶದಲ್ಲೇ ರಾಜ್ಯ 2ನೇ ಸ್ಥಾನದಲ್ಲಿದೆ. ಆದರೆ,ಕೇಂದ್ರ ತಾರತಮ್ಯ ನೀತಿ ಅನುಸರಿಸಿ ತೆರಿಗೆ ವಂಚನೆ ಮಾಡುತ್ತಿದೆ ಎಂದು ಗುಡುಗಿದರು.

ನಾವು ಕೇಂದ್ರಕ್ಕೆ 4.50 ಲಕ್ಷ ಕೋಟಿ ರೂ. ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ. ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಅವರೇ ಪ್ರಧಾನಿ ಆಗಿ ಹಿಂದೆ ಆಡಿದ ಮಾತಿಗೆ ಬದ್ಧರಾಗಿರಬೇಕಲ್ಲವೆ? ಆದರೆ, ಅವರೇ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ 15ನೇ ಹಣಕಾಸು ಆಯೋಗ ಶಿಾರಸು ಮಾಡಿದ್ದ 5495 ಕೋಟಿ ರೂ., ಬೆಂಗಳೂರು ರಿಂಗ್ ರಸ್ತೆಗೆ 3000 ಕೋಟಿ ರೂ. ಬೆಂಗಳೂರು ನಗರ ಕೆರೆ ಅಭಿವೃದ್ಧಿಗೆ 3000 ಕೋಟಿ ರೂ. ಸೇರಿ 11,495 ಕೋಟಿ ರೂ. ಕೊಡುವ ಭರವಸೆ ನೀಡಿದ್ದರು. ನಯಾ ಪೈಸೆ ಕೊಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ೋಷಿಸಿದ 5300 ಕೋಟಿ ರೂ.ಗಳನ್ನೂ ಕೊಡಲಿಲ್ಲ ಎಂದರು.

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೇವೆ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೇವೆ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ. ಅಭಿವೃದ್ಧಿ ಕುಂಠಿತವಾಗಿದೆ. ಪಾಪರ್ ಆಗಿದೆ. ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ಪಾಪರ್ ಆದರೆ 83 ಸಾವಿರ ಕೋಟಿ ಬಂಡವಾಳ ವೆಚ್ಚ ಹಂಚಿಕೆ ಸಾಧ್ಯವೆ? ಎಂದು ಪ್ರಶ್ನಿಸಿದರು.

ಗುರಿ ತಲುಪುಲು ಹಿಂದೇಟು ಸಲ್ಲ

ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಮಾತೇ ಇಲ್ಲ ಎಂದು ಹೇಳಿದರು.

ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಸೂಚಿಸಿದರು.

7ನೇ ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಅಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net