ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ 5 ರಿಂದ 50 ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರಿಗೆ ಟಿಬಿಬಿ ಎಚ್ಚರಿಕೆ ನೀಡಲಾಗಿದೆ.
ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಭದ್ರಾ, ತುಂಗಾ, ವರದ ನದಿಗಳಿಂದ ಭಾರಿ 47 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಬರುತ್ತಿದೆ. 105,788 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 99.976 ಟಿಎಂಸಿ ನೀರು ಸಂಗ್ರಹವಾಗಿದೆ. 50 ಸಾವಿರ ಕ್ಯೂಸೆಕ್ ವರೆಗೆ ನೀರನ್ನು ಹರಿಬಿಡಲು ನಿರ್ಧರಿಸಲಾಗಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.