ಮೈಕ್ರೋಸಾಫ್ಟ್​ ಹಾದಿ ಹಿಡಿದ TCS​! 12,000 ಉದ್ಯೋಗಿಗಳಿಗೆ ಗೇಟ್​ಪಾಸ್ ಕೊಡಲು ನಿರ್ಧಾರ, ಕಾರಣ ಬಹಿರಂಗ ​

ವಿಜಯವಾಣಿ (92)
Published on

TCS Layoffs: ಭಾರತದ ಅತಿದೊಡ್ಡ ಐಟಿ ಸೇವೆಗಳ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಇದೀಗ ತನ್ನ ಸಂಸ್ಥೆಯ 12,000ಕ್ಕೂ ಅಧಿಕ ಉದ್ಯೋಗಿಗಳಿಗೆ ಗೇಟ್​ಪಾಸ್​ ಕೊಡಲು ನಿರ್ಧರಿಸಿದೆ.

ಇತ್ತೀಚೆಗಷ್ಟೇ ದೈತ್ಯ ಟೆಕ್ ಕಂಪನಿಯಾದ ಮೈಕ್ರೋಸಾಫ್ಟ್​ ತನ್ನ 3ನೇ ಸುತ್ತಿನಲ್ಲಿ ವಜಾ ಪ್ರಕ್ರಿಯೆಯಲ್ಲಿ ಬರೋಬ್ಬರಿ 9 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಬಿಸಾಡಿತು. ಈಗ ಅದೇ ಹಾದಿಯನ್ನು ಹಿಡಿದಿರುವ ಟಿಸಿಎಸ್​,​ 2026ರ ಹಣಕಾಸು ವರ್ಷದಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಶೇ.2ರಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ ವಜಾಗೊಳಿಸುತ್ತಿರುವುದಾಗಿ ತಿಳಿಸಿದೆ.

ಸಂಸ್ಥೆಯು ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುತ್ತಿದ್ದು, ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೇ ಬಳಕೆಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಸುಮಾರು 12,200 ಉದ್ಯೋಗಗಳನ್ನು ಕಡಿತಗೊಳಿಸಲಾಗುವುದು ಎಂದಿದೆ. "ನಮ್ಮ ಗ್ರಾಹಕರಿಗೆ ಒದಗಿಸುವ ಸೇವೆಯಲ್ಲಿ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ" ಎಂದು ಟಿಸಿಎಸ್​ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net