

ರಾವಂದೂರು: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಅಗತ್ಯವಿದೆ ಎಂದು ಶ್ರೀ ಮೋಕ್ಷಪತಿ ಸ್ವಾಮೀಜಿ ತಿಳಿಸಿದರು.
ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆ ಹೆಚ್ಚಾದಂತೆ ಮಕ್ಕಳಲ್ಲಿ ಸಂಸ್ಕಾರಗಳು ಕಡಿಮೆಯಾಗುತ್ತಿದ್ದು, ಗುರು-ಹಿರಿಯರ ಬಗ್ಗೆ ಯಾವುದೇ ರೀತಿಯ ಗೌರವ ಭಾವನೆ ಇಲ್ಲದಂತಾಗುತ್ತಿದೆ. ಆದ್ದರಿಂದ ಬಾಲ್ಯದಿಂದಲೇ ಮಕ್ಕಳಿಗೆ ಪಾಲಕರು ವಿದ್ಯಾಭ್ಯಾಸದ ಜತೆಗೆ ಸಂಸ್ಕಾರ ಕಲಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್ ಮಾತನಾಡಿ, ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಿ ಚೆನ್ನಾಗಿ ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್.ವಿ.ವಿಶ್ವನಾಥ್, ಪ್ರಾಂಶುಪಾಲ ಕೆ.ಎನ್.ಶಿವಶಂಕರ್, ಉಪಪ್ರಾಂಶುಪಾಲ ಸುರೇಶ್, ಉಪನ್ಯಾಸಕರಾ ಲಕ್ಷ್ಮೀ ಕಾಂತ್, ರವಿ, ರಮೇಶ್, ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ್, ಮುಖಂಡರಾದ ಕುಮಾರ್ ವಿಜಯ್, ನದೀಮ್, ಮಂಜುನಾಥ್, ರೇವಣ್ಣ ಮತ್ತಿತರರು ಹಾಜರಿದ್ದರು.