ಮಕ್ಕಳಿಗೆ ಜಾನಪದ ಸಂಸ್ಕೃತಿಯ ಮಹತ್ವ ತಿಳಿಸಿ

Folk Culture
Published on

ಶಿವಮೊಗ್ಗ: ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಸದಸ್ಯೆ ಕವಿತಾ ಸುಧೀಂದ್ರ ಹೇಳಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದಿಂದ ಶುಕ್ರವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಾನಪದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನತೆ ಜಾನಪದದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದರು.

ಪರಿಷತ್ ಜಿಲ್ಲಾಧ್ಯಕ್ಷ ಡಾ. ಎಂ.ವೆಂಕಟೇಶ್ ಮಾತನಾಡಿ, ಪರಿಷತ್‌ನಿಂದ ನಿರಂತರವಾಗಿ ಜಾನಪದದ ಬಗ್ಗೆ ಯುವಜನರಲ್ಲಿ ಆಸಕ್ತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಡಿ.ಬಿ.ಶಿವರುದ್ರಪ್ಪ ಮಾತನಾಡಿ, ಪಿಯು ಶಿಕ್ಷಣ ಹಂತ ಬಹಳ ಮುಖ್ಯ. ವಿದ್ಯಾರ್ಥಿಗಳ ಬದುಕು ರೂಪಿಸಿಕೊಳ್ಳುವ ಮಹತ್ವದ ದಿನಗಳು ಆಗಿರುತ್ತವೆ. ಜತೆಗೆ ಇತರ ಒಳ್ಳೆಯ ಹವ್ಯಾಸಗಳು ಅಗತ್ಯ ಎಂದು ತಿಳಿಸಿದರು.

ಜಿಲ್ಲಾ ಘಟಕದ ಸದಸ್ಯೆ ಪ್ರೊ. ಮಮತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜಾನಪದ ಅರಿವು ಬದುಕಿನ ಪಥವನ್ನು ಬದಲಾಯಿಸುತ್ತದೆ ಎಂದರು. ಕಾಲೇಜಿನ ಪ್ರಾಚಾರ್ಯ ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಪರಿಷತ್‌ನ ಶಿವಮೊಗ್ಗ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಪ್ರಮುಖರಾದ ಹರ್ಷ, ನಟರಾಜ್, ಡಾ.ಉದಯ್ ಕುಮಾರ್, ಡಾ. ಪ್ರೀತಂ, ತಿಮ್ಮೇಶಪ್ಪ, ಗಜೇಂದ್ರ, ಸಂದೇಶ್, ರೋಹಿಣಿ, ನಾಗೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net