

ಮೈಸೂರು: ನಾಲ್ಕು ವರ್ಷದ ಹಿಂದೆ ವಿದ್ಯಾರ್ಥಿನಿಯೊಬ್ಬಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಟಾಪರ್ ಮಾಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮೈಸೂರು ನಗರದ ಹುಲ್ಲಿನ ಬೀದಿಯಲ್ಲಿ ಕೆ.ಎಂ. ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಶಿಕ್ಷಕ ಶಿಕ್ಷಗೆ ಒಳಗಾದ ಅಪರಾಧಿ. 2016ರ ನವೆಂಬರ್ನಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ತೀರ್ಪು ನೀಡಿದ್ದು, ಅಪರಾಧಿಗೆ 10 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಇದನ್ನೂ ಓದಿರಿ ಮಕ್ಕಳಿಬ್ಬರು ನೀರುಪಾಲು! ಅಯ್ಯೋ ಮಕ್ಕಳೇ… ಎಂದು ಚೀರಾಡುತ್ತಾ ಬಂದ ಅಮ್ಮ-ಚಿಕ್ಕಮ್ಮನೂ ಬದುಕಲಿಲ್ಲ
ಕೆ.ಎಂ. ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಶಿಕ್ಷಕನೊಬ್ಬ 14 ವರ್ಷದ ಬಾಲಕಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಟಾಪರ್ ಮಾಡುವುದಾಗಿ ಕೋಚಿಂಗ್ ನೀಡುತ್ತಿದ್ದ. ಈ ವೇಳೆ ಆಕೆಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ವಿಶೇಷ ನ್ಯಾಯಾಧೀಶೆ ಬಿ.ಎಸ್.ಜಯಶ್ರೀ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಸೂಕ್ತ ಪರಿಹಾರ ನೀಡಲು ಕೋರ್ಟ್ ಆದೇಶಿಸಿದೆ.