ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕಿಯರಿಂದ ಕಿರುಕುಳ! ರೈಲಿಗೆ ತಲೆ ಕೊಟ್ಟು ಪ್ರಾಣ ಬಿಟ್ಟ ಶಿಕ್ಷಕಿ

Chikkodi
Published on

ಚಿಕ್ಕೋಡಿ: ರೈಲಿಗೆ ತಲೆ ಕೊಟ್ಟು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂರುವ ಘಟನೆ ರಾಯಬಾಗ ರೈಲು ನಿಲ್ದಾಣ ಸಮೀಪ ನಡೆದಿದೆ. ಅನ್ನಪೂರ್ಣ ರಾಜು ಬಸಾಪೂರೆ (55) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ.

ಮೃತ ಶಿಕ್ಷಕಿ ಅನ್ನಪೂರ್ಣ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ನಿವಾಸಿ. ಸದ್ಯ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕಿಯರ ಹೆಸರು ಬರೆದಿಟ್ಟಿದ್ದಾರೆ.

ಶಿಕ್ಷಕಿ ಮೃತದೇಹವನ್ನು ತಂದು ಕುಡಚಿ ಪಟ್ಟಣದ ಜುನ್ನೇದಿಯಾ ಶಾಲೆಯ ಮುಂಭಾಗ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ ನೀಡಿದ್ದಾರೆ ಎನ್ನಲಾದ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕಿಯರ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net