

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2024ರ ವೇಳಾಪಟ್ಟಿ ಪ್ರಕಟಿಸಿದೆ.
ರಾಜ್ಯಾದ್ಯಂತ ಜೂ.30ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ http://schooldducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ತಪ್ಪದೇ ಅಥೈಸಿಕೊಂಡು ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಗಳು ತಿಳಿಸಿದ್ದಾರೆ.