

ಮಧ್ಯಪ್ರದೇಶ: ಶಾಲಾ ಶಿಕ್ಷಕಿಯೊಬ್ಬರು ಲಂಚ ಸ್ವೀಕರಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ, ವಿಡಿಯೋ ಗಮನಿಸಿದ ಶಿಕ್ಷಣ ಇಲಾಖೆ ಅವರನ್ನು ಕೆಲಸದಿಂದ ಅಮಾನುತುಗೊಳಿಸಿದೆ.
ಮಹಿಳೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಪ್ರೌಢ ಶಾಲೆಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿಸಲಾಗಿದ್ದು, 6,000 ರೂ. ಲಂಚ ಸ್ವೀಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗಿದೆ. ದೃಶ್ಯ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಈ ವಿಷಯ ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿದೆ. ಘಟನೆಯ ಬೆನ್ನಲ್ಲೇ ಇಲಾಖೆಯ ಅಧಿಕಾರಿಗಳು ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ.
ಮೂಲಗಳ ಪ್ರಕಾರ, ರಾಜನಗರ ಕನ್ಯಾ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಶಿಕ್ಷಕರು ನಗದು ಸ್ವೀಕರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಕೆ. ಕಾಟೋರಿ ಅವರು ಸಾಗರದಲ್ಲಿರುವ ಉಪನಿರ್ದೇಶಕರಿಗೆ ಪತ್ರ ಬರೆದಿದ್ದರು. ಇದನ್ನು ಗಮನಿಸಿದ ಉಪನಿರ್ದೇಶಕರು ಇದೀಗ ಸಸ್ಪೆಂಡ್ ಮಾಡಿದ್ದಾರೆ,(ಏಜೆನ್ಸೀಸ್).