ಶಿಕ್ಷಕರ ಕ್ಷೇತ್ರದ ಚುನಾವಣೆ: ಶಿಕ್ಷಕರಿಗೆ ಸಾಂದರ್ಭಿಕ ರಜೆ ನೀಡಲು ಸೂಚನೆ

election-1
Published on

ಬೆಂಗಳೂರು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾರ ಶಿಕ್ಷಕರಿಗೆ ೆ.16ರಂದು ಸಾಂದರ್ಭಿಕ ರಜೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ.

ಬೆಂಗಳೂರು ನಗರ, ಗ್ರಾಮಾಂತರ, ಬಿಬಿಎಂಪಿ ಮತ್ತು ರಾಮನಗರ ಜಿಲ್ಲೆಯಲ್ಲಿ ಉಪ ಚುನಾವಣೆ ನಡೆಸಲು ೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರರು ಮತದಾನ ಮಾಡಲು ಅನುಕೂಲವಾಗುವಂತೆ ೆ.16ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ.

ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿಯನ್ನು ಪಡೆಯಬೇಕಾಗಿರುವ ಕಾರಣ ಈ ಷರತ್ತಿಗೆ ಒಳಪಟ್ಟು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net