ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಅಧಿಕ ವೇತನ ನೀಡಿ

D.5-MDG-3P1 teachers
ಮೂಡಿಗೆರೆಯಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯನ್ನು ತಹಸೀಲ್ದಾರ್ ರಾಜಶೇಖರ್‌ಮೂರ್ತಿ ಉದ್ಘಾಟಿಸಿದರು. ಗೀತಾ ರಂಜನ್ ಅಜಿತ್‌ಕುಮಾರ್, ಆಶಾ, ಎಂ.ಎ.ಹಂಝ, ಖುರ್ಷಿದಾ ಭಾನು, ಡಿ.ಕೆ.ಲಕ್ಷ್ಮಣ್ ಗೌಡ, ಹೇಮಂತ್ ಚಂದ್ರ, ಪಿ.ಎಚ್.ಪುಟ್ಟರಾಜು ಇತರರಿದ್ದರು.
Published on

ಮೂಡಿಗೆರೆ: ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಕರ ಪಾತ್ರ ಪ್ರಮುಖ ಎಂದು ಪಪಂ ಅಧ್ಯಕ್ಷೆ ಗೀತಾ ರಂಜನ್ ಅಜಿತ್‌ಕುಮಾರ್ ಹೇಳಿದರು.
ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೂ ಶಿಕ್ಷಕರ ಸಂಘಗಳು ಆಲಿಸಿ ಅದನ್ನು ಬಗೆಹರಿಸುವ ಕೆಲಸ ಮಾಡಬೇಕೆಂದು ಹೇಳಿದರು.
ತಹಸೀಲ್ದಾರ್ ರಾಜಶೇಖರ್‌ಮೂರ್ತಿ ಮಾತನಾಡಿ, ವಿದ್ಯಾರ್ಥಿಯನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವಂತಹ ಪುಣ್ಯದ ಕಾರ್ಯಕ್ಕೆ ಅವಕಾಶ ಸಿಕ್ಕಿರುವುದು ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಮಾತ್ರ. ಹಾಗಾಗಿ ಪಿಯುಸಿ, ವಿಶ್ವವಿದ್ಯಾಲಯದ ಪ್ರೊಫೆಸರ್‌ಗಳಿಗಿಂತ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಅಧಿಕ ವೇತನ ನೀಡಲು ಶಿಕ್ಷಣ ತಜ್ಞರು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ತಿಳಿಸಿದರು.
ಕಸಾಪ ಹಾಸನ ಜಿಲ್ಲಾಧ್ಯಕ್ಷ ಡಾ. ಎಚ್.ಎಲ್.ಮಲ್ಲೇಶ್ ಗೌಡ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ಚರಿತ್ರೆ ಬಗ್ಗೆ ಉಪನ್ಯಾಸ ನೀಡಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಶೇ.100 ಫಲಿತಾಂಶ ಪಡೆದ ಶಾಲೆಯ ಮುಖ್ಯಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.
ಪಪಂ ಸದಸ್ಯರಾದ ಆಶಾ ಮೋಹನ್, ಎಂ.ಎ.ಹಂಝ, ಖುರ್ಷಿದಾ ಭಾನು, ಕಸಾಪ ತಾಲೂಕು ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ ಗೌಡ, ಬಿಇಒ ಹೇಮಂತ್ ಚಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎ.ಆರ್.ವಿಜಯ್‌ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಚ್.ಪುಟ್ಟರಾಜು, ಕೆ.ಜಿ.ಶ್ರೀನಿವಾಸ್, ಜಿ.ರವಿನಾಯ್ಕ, ಶಮಿಮುನ್ನಿಸಾ, ಫೈರೋಜ್ ಅಹಮ್ಮದ್, ನವೀನ್, ಎಚ್.ಮಂಜಪ್ಪ, ಯಾಸ್ಟೀನ್ ಸುಲ್ತಾನ, ಜಗದೀಶ್ ನಾಯಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net