ವಿದ್ಯಾರ್ಥಿಗಳ ಗುರಿ ತಲುಪಲು ಶಿಕ್ಷಕರ ಪಾತ್ರ ಬಹುಮುಖ್ಯ; ಎಂ.ಎಂ. ಖನ್ನೂರ

6-RNR-04
Published on

ರಾಣೆಬೆನ್ನೂರ: ಶಿಕ್ಷಕರು ನಾವಿಕರಿದ್ದಂತೆ ವಿದ್ಯಾರ್ಥಿಗಳ ಜೀವನದ ಗುರಿ ತಲುಪುವವರೆಗೂ ಅವರ ಪಾತ್ರ ಪ್ರಮುಖವಾಗಿರುತ್ತದೆ ಎಂದು ಖನ್ನೂರ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷ ಎಂ.ಎಂ. ಖನ್ನೂರ ಹೇಳಿದರು.
ನಗರದ ಖನ್ನೂರು ವಿದ್ಯಾನಿಕೇತನ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಕೇವಲ ಪಾಠ ಹೇಳುವುದಷ್ಟೆಯಲ್ಲ, ಉತ್ತಮ ಸಂಸ್ಕಾರ ಸಂಸ್ಕೃತಿ ಕಲಿಸಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರಾಗಿ ಮುನ್ನಡೆದಾಗ ತಾವುಗಳ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದಕ್ಕೂ ಸಾರ್ಥಕವಾಗುತ್ತದೆ. ಶಿಕ್ಷಕರ ಮಾರ್ಗದರ್ಶನದಲ್ಲಿ ಯಾರು ಮುನ್ನಡೆಯುತ್ತಾರೋ ಅಂತವರು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.
ಪ್ರಾಚಾರ್ಯೆ ಸಮಿರಾ ಫರ್ನಾಂಡಿಸ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net