ICC Champions Trophy 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಆಟಗಾರರು ಇವರೇ...

TEAM INDIAY
Published on

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ

ICC Champions Trophy 2025 : ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ.

ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸೋಲಿನ ಬಳಿಕ ಬಿಸಿಸಿಐ ಸಾಕಷ್ಟು ಅಳೆದು ತೂಗಿ ಚಾಂಪಿಯನ್ಸ್ ಟ್ರೋಫಿಗೆ ಆಟಗಾರರ ಹೆಸರನ್ನು ಅಂತಿಮಗೊಳಸಿದೆ.

ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯುತ್ತಿದ್ದು, ಇದಕ್ಕಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಭಾರತ ತಂಡ ಪ್ರಕಟಿಸಿರುವ 15 ಸದಸ್ಯರ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಶುಭಂ ಗಿಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಂ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.

ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ವೇಳಾಪಟ್ಟಿ

ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಟೀಂ ಇಂಡಿಯಾ ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶದೊಂದಿಗೆ ಗುಂಪು-ಎ ನಲ್ಲಿದೆ. ಈ ಮೂರೂ ತಂಡಗಳು ಗುಂಪು ಹಂತದಲ್ಲಿ ಒಂದೊಂದು ಪಂದ್ಯವನ್ನು ಆಡಲಿವೆ.

ಫೆ.20ರಿಂದ ಈ ಟೂರ್ನಿಯಲ್ಲಿ ಪಾದಾರ್ಪಣೆ ಮಾಡಲಿರುವ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಆ ಬಳಿಕ ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ನಂತರ ಅವರು ತಮ್ಮ ಅಂತಿಮ ಗುಂಪಿನ ಪಂದ್ಯದಲ್ಲಿ ಮಾರ್ಚ್ 2 ರಂದು ನ್ಯೂಜಿಲೆಂಡ್ ಅನ್ನು ಎದುರಿಸಲಿದ್ದಾರೆ. ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net