ತಾಂತ್ರಿಕ ದೋಷ: ಮಧುರೈನಿಂದ ದುಬೈ ಹೊರಟಿದ್ದ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ SpiceJet

Spicejet
Published on

ಚೆನ್ನೈ: ಮಧುರೈನಿಂದ ದುಬೈಗೆ ಹೊರಟಿದ್ದ ಸ್ಪೈಸ್ ಜೆಟ್ ( SpiceJet ) ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನಲೆ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಸೋಮವಾರ (ಅ.27) ಮಾಹಿತಿ ನೀಡಿವೆ.

ಮಾಹಿತಿಗಳ ಪ್ರಕಾರ, SG23 ವಿಮಾನವು 160 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು, ಅವರನ್ನು ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಈ ವೇಳೆ ಯಾವುದೇ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಳಿಕ ವಿಮಾನ ನಿಲ್ದಾಣದ ಅಧಿಕಾರಿಗಳು ತಾಂತ್ರಿಕ ದೋಷಕ್ಕೆ ಕಾರಣ ಏನೆಂಬುದನ್ನು ಪರಿಶೀಲಿಸಲಾಗುತ್ತಿದ್ದು, ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚುವುದಾಗಿ ಮಾಹಿತಿ ನೀಡಿದ್ದಾರೆ.

ಈ ಹಿಂದೆ ಪಾಟ್ನಾಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ತಾಂತ್ರಿಕ ದೋಷದ ಶಂಕೆಯಿಂದ ಹೊರಟ ಕೆಲವೇ ಗಂಟೆಗಳಲ್ಲಿ ದೆಹಲಿಗೆ ವಾಪಾಸ್ಸಾಗಬೇಕಾಯಿತು. ಆದರೆ ಈ ಕುರಿತು ವಿಮಾನಯಾನ ಸಂಸ್ಥೆಯು ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆಗಸ್ಟ್‌ನಲ್ಲಿ ಇದೇ ರೀತಿಯ ಘಟನೆಯಲ್ಲಿ, ಸ್ಪೈಸ್‌ಜೆಟ್ ವಿಮಾನವು ದೆಹಲಿಯಿಂದ 205 ಪ್ರಯಾಣಿಕರು ಹಾಗೂ ಏಳು ಸಿಬ್ಬಂದಿಯೊಂದಿಗೆ ಹೊರಟಿದ್ದು, ತಾಂತ್ರಿಕ ದೋಷದಿಂದಾಗಿ ಶ್ರೀನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದು ತಿಳಿದುಬಂದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net