

Metro: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆಗೊಂಡ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಹಿನ್ನೆಲೆ ಭಾನುವಾರ ಸಂಜೆಯಿಂದ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ಹಳದಿ ಮೆಟ್ರೋ ಮಾರ್ಗದಲ್ಲಿ ಈ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ಸಂಜೆ 4ರಿಂದಲೇ ಈ ಸಮಸ್ಯೆ ಕಾಣಿಕೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಹಿನ್ನೆಲೆ ಮೆಟ್ರೋ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಪ್ರಯಾಣಿಕರು BMRCL ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಂತ್ರಿಕ ದೋಷದ ಕಾರಣದಿಂದ ಸಂಜೆ 7:00 ಗಂಟೆಯಿಂದ ಹಳದಿ ಮಾರ್ಗದ (ಆರ್‌ವಿ ರಸ್ತೆದಿಂದ ಬೊಮ್ಮಸಂದ್ರವರೆಗೆ) ಮೆಟ್ರೋ ರೇಲುಗಳು ನಿಯೋಜಿತ ವೇಳೆಗೆ ಚಲಿಸದೆ ವಿಳಂಬವಾಗುತ್ತಿವೆ. ಸೇವೆಗಳು ರಾತ್ರಿ 9:00 ಗಂಟೆಗೆ ಸಹಜ ವೇಳಾಪಟ್ಟಿಗೆ ಮರಳುವ ನಿರೀಕ್ಷೆಯಿದೆ.ನಾವು ಈ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಮತ್ತು ನಿಮ್ಮ ಸಹಕಾರಕ್ಕೆ ಹೃತ್ತೂರ್ವಕ ಧನ್ಯವಾದಗಳು ಸಲ್ಲಿಸುತ್ತೇವೆ ಎಂದು ನಮ್ಮ ಮೆಟ್ರೋ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.