ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಟೆಕ್ನಿಶಿಯನ್ ಬಂಧನ

Crime Logo
Published on

ಬೆಂಗಳೂರು: ಸ್ಕಾೃನಿಂಗ್ ಮಾಡುವಾಗ ವೃದ್ಧ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಟೆಕ್ನಿಶಿಯನ್‌ನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಅಶೋಕ್ (೨೪) ಬಂಧಿತ. ಆರೋಪಿಯ ವಿರುದ್ಧ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿರುವ ಆರೋಪಿ, ಹೆಬ್ಬಾಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಹೆಬ್ಬಾಳ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಮಲ್ಲಿಸ್ಪೆಷಾಲಿಟಿ ಆಸ್ಪತ್ರೆಯ ಸ್ಕಾೃನಿಂಗ್ ಸೆಂಟರ್‌ನಲ್ಲಿ ಟೆಕ್ನಿಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ೬೦ ವರ್ಷದ ಮಹಿಳೆಯೊಬ್ಬರಿಗೆ ಹಿರಿಯ ವೈದ್ಯರು ಸಿಟಿ ಸ್ಕಾೃನಿಂಗ್‌ಗೆ ಸಲಹೆ ನೀಡಿದರು. ಹೀಗಾಗಿ ಸೆ.೩ರಂದು ವೃದ್ಧೆ ಸ್ಕಾೃನಿಂಗ್ ಸೆಂಟರ್‌ಗೆ ಬಂದಿದ್ದಾರೆ. ಆಗ ವೃದ್ಧೆಯಯನ್ನು ವಿವಸ್ತ್ರಗೊಳಿಸಿ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಅದರಿಂದ ಮುಜುಗರಕ್ಕೊಳಗಾದ ವೃದ್ಧೆ ಆಸ್ಪತ್ರೆಯಿಂದ ಹೊರಬಂದು ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net