32 ಕೆಜಿ ತೂಕದ ಸಂಗ್ರಾಣಿ ಕಲ್ಲು ಎತ್ತಿದ 11 ವರ್ಷದ ಪೋರ ಇವನೇ…

sangrani stone
Published on

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಭಂಡಾರದ ಒಡೆಯ ಬೀರಲಿಂಗೇಶ್ವರನ ಜಾತ್ರಾ ಮಹೋತ್ಸವ ನಡೆಯಿತು.

ಜಾತ್ರೆ ಅಂಗವಾಗಿ ನಡೆದ ಭಾರ ಎತ್ತುವ ಸ್ಪರ್ಧೆಯಲ್ಲಿ ನೆರೆಯ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳ ಪೈಲ್ವಾನ್‌ಗಳು ಭಾಗವಹಿಸಿ ತಮ್ಮ ಕಸರತ್ತು ಪ್ರದರ್ಶಿಸಿದರು. ಐದನೇ ತರಗತಿ ಓದುತ್ತಿರುವ ತಾಳಿಕೋಟೆಯ 11 ವರ್ಷದ ಬಾಲಕ ಉಸ್ಮಾನ್ ಗಣಿ 32 ಕೆಜಿ ಭಾರದ ಸಂಗ್ರಾಣಿ ಕಲ್ಲು ಎತ್ತುವ ಮೂಲಕ ಎಲ್ಲರಲ್ಲಿ ಅಚ್ಚರಿ ಮೂಡಿಸಿದ.

ಇದರ ಜತೆ ಹಲವು ಯುವ ಪೈಲ್ವಾನ್‌ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಶಕ್ತಿ ಪ್ರದರ್ಶನ ತೋರಿ ನೋಡುಗರ ಮೆಚ್ಚುಗೆಗೆ ಪಾತ್ರರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net