ವಿದ್ಯಾರ್ಥಿ ನಿಲಯಕ್ಕೆ ತಹಸೀಲ್ದಾರ್ ಭೇಟಿ

ವಿದ್ಯಾರ್ಥಿ ನಿಲಯಕ್ಕೆ ತಹಸೀಲ್ದಾರ್ ಭೇಟಿ
Published on

ಎಚ್.ಡಿ. ಕೋಟೆ: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ತಹಸೀಲ್ದಾರ್ ಶ್ರೀನಿವಾಸ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ರವಿಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪುರಸಭಾ ಸದಸ್ಯ ಮಿಲ್ ನಾಗರಾಜು ವಿದ್ಯಾರ್ಥಿ ನಿಲಯದಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂದು ಆರೋಪಿಸಿದ ಹಿನ್ನೆಲೆ ಸೋಮವಾರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ, ಎಸ್ಸಿ, ಎಸ್ಟಿ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net