ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ: ಒಂದೇ ಕುಟುಂಬದ ಏಳು ಮಂದಿ ದುರ್ಮರಣ!

Accident
Published on

ವಿಕರಬಾದ್: ಶನಿವಾರ ಬೆಳಗ್ಗೆ ತೆಲಂಗಾಣದ ವಿಕರಬಾದ್​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೊಮಿನ್​ಪೇಟಾ ವಲಯದ ಇಜರಾಚಿಟ್ಟಂಪಲ್ಲಿ ಏರಿಯಾ ಬಳಿ ದುರಂತ ನಡೆದಿದ್ದು, ಆರ್​ಟಿಸಿ ಬಸ್​-ಲಾರಿ-ಆಟೋ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಅನೇಕ ಮಂದಿಗೆ ಗಂಭೀರ ಗಾಯಳಾಗಿವೆ. ರಸ್ತೆ ಪಕ್ಕದಲ್ಲಿ ಆರ್​ಟಿಸಿ ಬಸ್​ ಪಾರ್ಕ್​ ಮಾಡಲಾಗಿತ್ತು. ಅದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಆಟೋ ಸೈಡಿಗೆ ಹಾಕಲು ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಹಾರಿ ಬಿದ್ದಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಲಾರಿಯು ಸಹ ಉರುಳಿಬಿದ್ದಿರುವುದರಿಂದ ಚಾಲಕನಿಗೆ ಗಂಭೀರ ಗಾಯವಾಗಿದೆ.

ಬೆಳಗಿನ ಜಾವ ಮಸುಕಾಗಿದ್ದರಿಂದ ರಸ್ತೆ ಕಾಣದೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರ ದೇಹಗಳನ್ನು ಹೊರ ತೆಗೆಯಲಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಇನ್ನು ಹೆಚ್ಚಿನ ಮಾಹಿತಿ ತನಿಖಾ ನಂತರವಷ್ಟೇ ತಿಳಿಯಲಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net