ಬಸ್-ಲಾರಿ ನಡುವೆ ಅಪಘಾತ: ಆರು ಮಂದಿ ಮೃತ್ಯು

accident
Published on

ಬಾಪಟ್ಲಾ(ತೆಲಂಗಾಣ): ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಆರು ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಚಿಲ್ಕಲೂರಿಪೇಟೆಯಲ್ಲಿ ನಡೆದಿದೆ.

ಮೃತರನ್ನು ಬಪಟ್ಲಾ ಜಿಲ್ಲೆಯ ನಿವಾಸಿಗಳಾದ ಅಂಜಿ (35), ಉಪ್ಪಗುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55), ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್​ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.

ಡಿಕ್ಕಿಯ ನಂತರ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಅವೆರಡೂ ಸುಟ್ಟು ಭಸ್ಮವಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net