

ಬೆಂಗಳೂರು: ಹಾಸ್ಯ ನಟ ಹಾಗೂ ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿನ್ನರ್, ಮಡೆನೂರು ಮನು ಮೇಲೆ ಕಿರುತೆರೆ ನಟಿ ಅ*ತ್ಯಾಚಾರ ಆರೋಪ ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಂತ್ರಸ್ತೆ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ಮಡೆನೂರು ಮನು ರನ್ನು ಬಂಧನ ಮಾಡಿದ್ದಾರೆ. ಹಾಸನದ ಶಾಂತಿಗ್ರಾಮದ ಬಳಿ ಮಡೆನೂರು ಮನುರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಆರೋಪಿಯನ್ನ ಬಂಧಿಸಿದ ಬಳಿಕ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
2018ರಿಂದಲೂ ಮನುವಿನ ಪರಿಚಯ ಇತ್ತು. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದೆವು. ಮೊದಲಿಗೆ ಪರಿಚಯ ಆಗಿ ಸ್ನೇಹ ಬೆಳೆದಿತ್ತು. ಒಮ್ಮೆ ಶಿಕಾರಿಪುರಕ್ಕೆ ಹೋದಾಗ ಹೋಟೆಲ್ ರೂಂಗೆ ಮನು ನನ್ನನ್ನು ಕರೆಸಿಕೊಂಡಿದ್ದರು. ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ಅವರು ಆರೋಪಿಸಿದ್ದಾರೆ. ಈ ವೇಳೆ ಪ್ರೆಗ್ನೆಂಟ್ ಆದಾಗ, ಆ ಬಳಿಕ ಮನು ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದರು ಎಂದು ನಟಿ ಆರೋಪಿಸಿದ್ದಾರೆ.
ಇನ್ನೂ ಈ ದೂರಿನ ಬಗ್ಗೆ ನಟ ಮಡೆನೂರು ಮನು ಪ್ರತಿಕ್ರಿಯೆ ನೀಡಿದ್ದು, ಇದು ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಮೇ 23ರಂದು 'ಕುಲದಲ್ಲಿ ಕೀಳ್ಯಾವುದೋ' ಸಿನಿಮಾ ರಿಲೀಸ್ ಇರುವಾಗ ಎಫ್‌ಐಆರ್ ಮಾಡುವ ಅವಶ್ಯಕತೆ ಇರಲಿಲ್ಲ. ತಾನು ಸುಮ್ಮನಿದ್ದರೂ ಬೇರೆಯವರು ಬಿಡುತ್ತಿಲ್ಲ, ಈ ರೀತಿ ಮಾಡು ಎಂದು ಹೇಳುತ್ತಿದ್ದಾರೆ ಎಂದು ಆಕೆ ಹೇಳಿದ್ದಾಳೆ. ಅವರು ಯಾರು ಎಂದು ನನ್ನ ಬಳಿ ಹೇಳಿದ್ದಾಳೆ. ಇಬ್ಬರು ಹೀರೊಗಳು ಒಬ್ಬರು ಲೇಡಿ ಡಾನ್ ಸೇರಿ ಹನ್ನೆರಡು ಜನ ನನ್ನ ಸಾವು ಬಯಸುತ್ತಿದ್ದರು. ನನ್ನ ಪಾಡಿಗೆ ನಾನು ಕೆಲಸ ಮಾಡಿಕೊಂಡಿದ್ದೇನೆ. ಎಲ್ಲಾ ಸಾಕ್ಷಿಯನ್ನು ಮುಂದಿಡುತ್ತೇನೆ. ನನ್ನ ಸಿನಿಮಾಗೆ ಮೋಸ ಆಗಬಾರದು. ನಿರ್ಮಾಪಕರು, ನಿರ್ದೇಶಕರಿಗೆ ಮೋಸ ಆಗಬಾರದು. ಕಾನೂನು ರೀತಿ ನಾನು ಸಾಕ್ಷಿಗಳನ್ನು ಬಹಿರಂಗಪಡಿಸುತ್ತೇನೆ ಎಂದು ವಿಡಿಯೊದಲ್ಲಿ ಮಡೆನೂರು ಮನು ತಿಳಿಸಿದ್ದಾರೆ.