

ಶಿವಮೊಗ್ಗ: ಭಗವದ್ಗೀತಾ ಅಭಿಯಾನ ಅತ್ಯುತ್ತಮ ಚಿಂತನೆ. ಇಂದಿನ ಸನ್ನಿವೇಶದಲ್ಲಿ ಭಗವದ್ಗೀತೆಯ ಸಾರವನ್ನು ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಒಳ್ಳೆಯದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶಿರಸಿ ಹಾಗೂ ಸ್ವರ್ಣರಶ್ಮಿ ಟ್ರಸ್ಟ್ ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನ-2025 ರಾಜ್ಯ ಮಟ್ಟದ ಮಹಾಸಮರ್ಪಣಾ ಕಾರ್ಯಕ್ರಮ ನ.30ರಂದು ಶಿವಮೊಗ್ಗದಲ್ಲಿ ಆಯೋಜನೆಯಾಗಿದ್ದು, ಅದರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅವರಿಗೆ ಆಹ್ವಾನ ನೀಡಿದ ಸಂದರ್ಭ ಮಾತನಾಡಿದರು.
ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ 2007ರಿಂದ ರಾಜ್ಯಾದ್ಯಂತ ಪ್ರತಿ ವರ್ಷ ಅಭಿಯಾನ ನಡೆಯುತ್ತಿರುವುದು ಸ್ವಾಗತಾರ್ಹ. ವಿದ್ಯಾರ್ಥಿಗಳು, ಯುವಕ, ಯುವತಿಯರು, ಸಾರ್ವಜನಿಕ ಸಂಘ ಸಂಸ್ಥೆಗಳು ಇದರಲ್ಲಿ ಭಾಗವಹಿಸಬೇಕು ಎಂದರು. ಪ್ರಮುಖರಾದ ಅಶೋಕ ಜಿ. ಭಟ್, ಮಂಜುನಾಥ ಶರ್ಮ ಇದ್ದರು.