ದೇಗುಲದ ಹುಂಡಿ ಹಣ ಕಳವು

Published on

ಹನೂರು: ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮಾರಮ್ಮನ ದೇಗುಲದ ಬಾಗಿಲಿನ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿ ಹಣವನ್ನು ಕದ್ದೊಯ್ದಿದ್ದಾರೆ.

ತಡರಾತ್ರಿ ದೇಗುಲದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು 2 ಹುಂಡಿಗಳನ್ನು ಕೊಂಡೋಯ್ದು ಅದರಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ. ಹುಂಡಿಗಳನ್ನು ಸಮೀಪದ ರಸ್ತೆ ಬದಿಯಲ್ಲಿ ಬಿಸಾಡಲಾಗಿದೆ. ಈ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ರಾಮಾಪುರ ಪೊಲೀಸರಿಗೆ ಮಾಹಿತಿ ತಿಳಿಸಿದರು. ಸ್ಥಳಕ್ಕಾಗಮಿಸಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net