

ಬೆಂಗಳೂರು: ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಅಖಿಲ ಕರ್ನಾಟಕ ಹಿಂದು ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ ಅವರಿದ್ದ ವಿಭಾಗೀಯ ಪೀಠ ನಡೆಸಿದೆ.
ಅರ್ಜಿದಾರರು ಅರ್ಚಕರಾಗಿರುವ ದೇವಾಲಯಗಳು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕ ಪ್ರಾಧಿಕಾರಗಳಾಗಿವೆ.
ಅಲ್ಲದೆ, ಸರ್ಕಾರದ ಸುತ್ತೋಲೆ ಪ್ರಸ್ತಾಪಿಸಿರುವುದು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಬರುವುದಿಲ್ಲ. ಆದ್ದರಿಂದ ಆರ್ ಡಿಐನಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ ಎಂದು ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಜತೆಗೆ ರಾಜ್ಯ ಸರ್ಕಾರ ಅರ್ಜಿದಾರರ ದೇವಾಲಯಗಳಲ್ಲಿ ಆರ್‌ಟಿಐನಡಿ ಮಾಹಿತಿ ಒದಗಿಸಲು ಸಿಬ್ಬಂದಿ ನೇಮಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಅಧೀನದ ದೇವಾಲಯಗಳಿಗೆ ಆದೇಶಿಸಿರುವ ಸುತ್ತೋಲೆ ರದ್ದುಪಡಿಸಲಾಗದು ಎಂದು ನ್ಯಾಯಪೀಠ ಹೇಳಿದೆ.