

ಕಲ್ಬುರ್ಗಿ: ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿಯ ಮುಖ್ಯ ಆವರಣ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ಬೀದರ್ ಮತ್ತು ಆಳಂದ ಮತ್ತು ಬಸವಕಲ್ಯಾಣ ಆವರಣದ ಶರಣ ಸಾಹಿತ್ಯ ಗ್ರಂಥಾಲಯ ಮತ್ತು ಸಂಪನ್ಮೂಲ ಕೇಂದ್ರದಲ್ಲಿರುವ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅಗತ್ಯತೆಗನುಗುಣವಾಗಿ ಬೋಧನಾಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಭಾಗವಾರು ವಿವರ
ಅನ್ವಯಿಕ ವಿದ್ಯುದ್ವಿಜ್ಞಾನ, ಸಸ್ಯಶಾಸ್ತ್ರ, ಜೀವರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಿತ, ಪರಿಸರ ವಿಜ್ಞಾನ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಮಟೀರಿಯಲ್ ಸೈನ್ಸ್, ಗಣಕವಿಜ್ಞಾನ, ಸಂಖ್ಯಾಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಮನೋವಿಜ್ಞಾನ ಸೇರಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಶೈಣಿಕ ಅರ್ಹತೆ
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ವಯೋಮಿತಿ, ವೇತನ
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ಮತ್ತು ಸರ್ಕಾರದ ನಿಯಮಾವಳಿಗಳ ಪ್ರಕಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಪ್ರಮುಖ ಸೂಚನೆಗಳು
ಅತಿಥಿ ಉಪನ್ಯಾಸಕರನ್ನು ಯುಜಿಸಿ ಹಾಗೂ ಕಾಲಕಾಲಕ್ಕೆ ಹೊರಡಿಸುವ ಸರ್ಕಾರಿ ನಿಯಮಾವಳಿ ಪ್ರಕಾರ ನೇಮಕ ಮಾಡಲಾಗುವುದು. ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, 2022&23ನೇ ಶೈಣಿಕ ಸಾಲಿಗೆ ಮಾತ್ರ ಸೀಮಿತ. ಸೂಚಿಸಲಾದ ಹುದ್ದೆಗಳ ಸಂಖ್ಯೆಯೂ ತಾತ್ಕಾಲಿಕವಾಗಿದ್ದು, ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ನೇಮಿಸಿಕೊಳ್ಳಲಾಗುವುದು.
ಆಯ್ಕೆಯ ಮಾನದಂಡ
ಸರ್ಕಾರದ ನಿಯಮಾವಳಿ ಮತ್ತು ಶೈಣಿಕ ಅರ್ಹತೆ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನಕ್ಕೆ ಹಾಜರಾದ ಮಾತ್ರಕ್ಕೆ ಅಭ್ಯರ್ಥಿಗಳ ನೇಮಕಾತಿ ಅಂತಿಮ ಎಂದು ಭಾವಿಸಬೇಕಿಲ್ಲ. ಅಭ್ಯರ್ಥಿಯ ಸೇವೆಯು ತೃಪ್ತಿಕರವಾಗಿರದಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಲಾಗುವುದು. ಹಾಗೂ ಆಯ್ಕೆಯಾಗುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಡುವ ಯಾವುದೇ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿಗಳನ್ನು ವಿವಿ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಶುಲ್ಕ ಮತ್ತು ಲಗತ್ತುಗಳೊಂದಿಗೆ ಶೈಣಿಕ ಅರ್ಹತೆ, ಅನುಭವದ ವಿವರ, ಜಾತಿ, ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ ಸಲ್ಲಿಸತಕ್ಕದ್ದು. ಸಂದರ್ಶನದ ದಿನಾಂಕ ಮತ್ತು ಇತರ ಮಾಹಿತಿಯನ್ನು ವಿವಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿ 600 ರೂ. ಮೀಸಲಾತಿ ಅಭ್ಯರ್ಥಿಗಳು 300 ರೂ. ಶುಲ್ಕ ಪಾವತಿಸತಕ್ಕದ್ದು. ಮೀಸಲಾತಿ ಅಭ್ಯರ್ಥಿಗಳು ಪ್ರವರ್ಗವಾರು ಮೂಲ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಿದರೆ ಮಾತ್ರ ಮೀಸಲಾತಿಗೆ ಅರ್ಹರು. ಸಂದರ್ಶನದ ವೇಳೆ ಮೂಲ ದಾಖಲೆ ಪರಿಶೀಲನೆ ಇರಲಿದೆ. ಅಪೂರ್ಣ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೇ ದಿನ: 30.11.2022
ಅರ್ಜಿ ಶುಲ್ಕ ಪಾವತಿ ವಿಳಾಸ: ಮುಖ್ಯಸ್ಥರು, ಕಲಬುರಗಿ ವಿಶ್ವವಿದ್ಯಾಲಯ, ಜ್ಞಾನಗಂಗಾ, ಕಲಬುರಗಿ&585106
ಅಧಿಸೂಚನೆಗೆ: http://bit.ly/3EGrpjY
ಮಾಹಿತಿಗೆ: https://gug.ac.in/