ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ Terror Threat To PM Modi's Aircraft

modi
Published on

Terror Threat To PM Modi's Aircraft : ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿದ್ದಾರೆ. ಫೆಬ್ರವರಿ 12 ರಿಂದ 14 ರವರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ನಲ್ಲಿ ನೆಲೆಸಿರುವ ಮೋದಿ ಇಂದು ಅಮೆರಿಕಕ್ಕೆ ತೆರಳಲಿದ್ದಾರೆ.

ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿದೆ ಎನ್ನಲಾಗಿದೆ. ಕರೆ ಮಾಡುತ್ತಿರುವ ವ್ಯಕ್ತಿ ಯಾರೆಂದು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ.

ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ. ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net