ಸ್ವಾತಂತ್ರ್ಯೋತ್ಸವದ ಹಿಂದಿನ ದಿನವೇ ಸಿಕ್ಕಿಬಿದ್ರು ಪಾಕ್ ಬೆಂಬಲಿತ ಭಯೋತ್ಪಾದಕರು!

Terrorists 31 Dec 19
Published on

ಚಂಡೀಗಢ: ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗಲೇ, ಸ್ವಾತಂತ್ರ್ಯೋತ್ಸವದ ಹಿಂದಿನ ದಿನವೇ ಪಾಕ್ ಬೆಂಬಲಿತ ನಾಲ್ವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಪಂಜಾಬ್ ಪೊಲೀಸರು ಈ ನಾಲ್ವರನ್ನು ಬಂಧಿಸಿದ್ದಾಗಿ ಭಾನುವಾರ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಪಂಜಾಬ್ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐಎಸ್​ಐ ಬೆಂಬಲಿತ ನಾಲ್ವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪಂಜಾಬ್​, ಹರಿಯಾಣ ಹಾಗೂ ಚಂಡೀಗಢಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ಬಂದೋಬಸ್ತ್ ಮತ್ತಷ್ಟು ಹೆಚ್ಚಿಸಲಾಗಿದೆ.

ಕೆನಡದಲ್ಲಿ ನೆಲೆ ಹೊಂದಿರುವ ಆರ್ಷ್ ಡಲ್ಲ ಹಾಗೂ ಆಸ್ಟ್ರೇಲಿಯಾದಲ್ಲಿ ನೆಲೆ ಹೊಂದಿರುವ ಗುರ್ಜಂಟ್ ಸಿಂಗ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ನಾಲ್ವರಿಂದ 3 ಹ್ಯಾಂಡ್ ಗ್ರೆನೇಡ್ (ಪಿ-86), ಒಂದು ಐಇಡಿ, 2-9ಎಂಎಂ ಪಿಸ್ತೂಲ್​ ಹಾಗೂ 40 ಜೀವಂತ ಕಾರ್ಟ್ರಿಡ್ಜ್​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net